×
Ad

ಗೃಹರಕ್ಷಕ ದಳದ ಸಿಬ್ಬಂದಿಗೆ ರಾಷ್ಟ್ರಪತಿ ಪದಕ

Update: 2016-08-14 23:41 IST

ಉಡುಪಿ, ಆ.14: ಬ್ರಹ್ಮಾವರ ಗೃಹರಕ್ಷಕ ದಳದ ಹಿರಿಯ ಸಿಬ್ಬಂದಿ ನೀಲಾ ವರ ಮಂಜುನಾಥ ಶೆಟ್ಟಿಗಾರ್ 70ನೆ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಗೃಹರಕ್ಷಕ ಮತ್ತು ಪೌರರಕ್ಷಣಾ ರಾಷ್ಟ್ರಪತಿಯವರ ಶ್ಲಾಘನೀಯ ಪದಕಕ್ಕೆ ಪಾತ್ರರಾಗಿದ್ದಾರೆ.

ಇವರು 1983ರಲ್ಲಿ ಬ್ರಹ್ಮಾವರ ಗೃಹರಕ್ಷಕ ದಳ ಘಟಕದಲ್ಲಿ ಸೇರಿ ಸುಮಾರು 30 ವರ್ಷಗಳ ಸೇವೆಯಲ್ಲಿ ಕಾನೂನು ಸುವ್ಯವಸ್ಥೆ, ಚುನಾವಣೆ ಕರ್ತವ್ಯ, ಪ್ರವಾಹ ರಕ್ಷಣಾ ಕರ್ತವ್ಯ ನಿರ್ವಹಿಸಿ ಇಲಾಖೆಯ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇವರ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ ಎಂದು ಜಿಲ್ಲಾ ಕಮಾಂಡೆಂಟ್ ಡಾ.ಕೆ.ಪ್ರಶಾಂತ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News