ಹಿಂಸಾಚಾರಕ್ಕೆಪ್ರಚೋದನೆ ಸರಿಯಲ್ಲ: ಅಮ್ನೆಸ್ಟಿ

Update: 2016-08-14 18:48 GMT

ಬೆಂಗಳೂರು, ಆ.14: ‘ಆಝಾದಿ’ ಘೋಷಣೆ ಕೂಗಿದ್ದನ್ನೆ ನೆಪವಾಗಿಟ್ಟುಕೊಂಡು ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕಲು ಹಾಗೂ ದ್ವೇಷಬಿತ್ತಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪಿಸಿರುವ ಅಮ್ನೆಸ್ಟಿ ಇಂಟರ್ ನ್ಯಾಷನಲ್, ಕಾಶ್ಮೀರ ವಿಷಯದಲ್ಲಿ ಯಾರ ಪರ ಹಾಗೂ ವಿರುದ್ಧವೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಶನಿವಾರ ಸಂಜೆ ಇಲ್ಲಿನ ಮಿಲ್ಲರ್ಸ್‌ ರಸ್ತೆಯಲ್ಲಿನ ಯುನೈಟೆಡ್ ಥಿಯೋಲಾಜಿಕಲ್ ಕಾಲೇಜ್ ಸಭಾಂಗಣದಲ್ಲಿ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಕಾಶ್ಮೀರಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಏರ್ಪಡಿಸಿದ್ದ ಕಾರ್ಯಾಗಾರಕ್ಕೆ ಎಬಿವಿಪಿ ಅಡ್ಡಿಪಡಿಸಿದ್ದು, ಅಕ್ಷಮ್ಯ ಎಂದು ಅಮ್ನೆಸ್ಟಿ ಸಂಸ್ಥೆಯ ತಾರಾರಾವ್ ಟೀಕಿಸಿದ್ದಾರೆ.ಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ಅಡಿಯಲ್ಲಿ ಅಮ್ನೆಸ್ಟಿ ಸಂಸ್ಥೆ ಕೆಲಸ ಮಾಡುತ್ತಿದ್ದು, ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು. ಅಲ್ಲಿನ ಸಂತ್ರಸ್ತರಿಗೆ ನ್ಯಾಯ ದೊರಕಬೇಕು ಎಂಬುದು ನಮ್ಮ ಆಶಯ. ನಿನ್ನೆ ನಡೆದ ಕಾರ್ಯಾಗಾರಕ್ಕೆ ಕಾಶ್ಮೀರಿ ಪಂಡಿತರನ್ನು ಆಹ್ವಾನಿಸಲಾಗಿತ್ತು.ಾರ್ಯಕ್ರಮದಲ್ಲಿ ಕೆಲವರು ‘ಆಝಾದಿ’ ಕೂಗಿದ್ದಾರೆ. ಆದರೆ, ಅದನ್ನೇ ನೆಪ ಮಾಡಿಕೊಂಡು ಅಭಿವ್ಯಕ್ತಿ ಸ್ವಾತಂತ್ರಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ವಾಸ್ತವವನ್ನು ಮುಚ್ಚಿಡಲು ಸಾಧ್ಯವಿಲ್ಲ. ಭಾವನಾತ್ಮಕ ವಿಚಾರಗಳಿಂದ, ದ್ವೇಷ-ಹಿಂಸೆಯಿಂದ ಸಮಸ್ಯೆಗೆ ಪರಿಹಾರ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಸೂಕ್ತ ಕ್ರಮ: ದೇಶ ವಿರೋಧಿ ಕೃತ್ಯವನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ‘ಅಮ್ನೆಸ್ಟಿ’ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಕಾರ್ಯ ನಡೆದಿರುವುದು ಗೊತ್ತಾದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.ಾರ್ಯಾಗಾರದಲ್ಲಿ ಕೆಲವರು ಘೋಷಣೆ ಕೂಗಿದ್ದಾರೆಂದು ಹೇಳಲಾಗುತ್ತಿದೆ. ಇವರೊಂದಿಗೆ ಯಾರು ಇದ್ದಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ದೇಶ ವಿರೋಧಿ ಕೃತ್ಯವನ್ನು ಒಪ್ಪಲು ಸಾಧ್ಯವಿಲ್ಲ. ಈ ಸಂಬಂಧ ಸೂಕ್ತ ತನಿಖೆಗೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ನಾಮ ಫಲಕಕ್ಕೆ ಮಸಿ: ‘ಕಾಶ್ಮೀರ ಸಂಘರ್ಷ ಸಂಬಂಧದ ಕಾರ್ಯಾಗಾರದಲ್ಲಿ ಸೇನೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಯುನೈಟೆಡ್ ಥಿಯೋಲಾಜಿಕಲ್ ಕಾಲೇಜಿನ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ಹೊರ ಹಾಕಿದ್ದಾರೆ.ೆಎನ್‌ಯು ಮಾದರಿಯಲ್ಲೆ ದೇಶವಿರೋಧಿ ಘೋಷಣೆ ಕೂಗುವ ಮೂಲಕ ದೇಶದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಯತ್ನವನ್ನು ಕೆಲ ಕಿಡಿಗೇಡಿಗಳು ನಡೆಸಿದ್ದಾರೆ. ಆ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News