ರಿಯೋ ಬ್ಯಾಡ್ಮಿಂಟನ್: ಶ್ರೀಕಾಂತ್ ಕ್ವಾರ್ಟರ್‌ಫೈನಲ್‌ಗೆ
Update: 2016-08-15 19:34 IST
ರಿಯೋಡಿ ಜನೈರೊ, ಆ.15: ಭಾರತದ ಬ್ಯಾಡ್ಮಿಂಟನ್ ಆಟಗಾರ ಕೆ. ಶ್ರೀಕಾಂತ್ ರಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದಾರೆ.
ಸೋಮವಾರ ಇಲ್ಲಿ ನಡೆದ ಪ್ರಿ-ಕ್ವಾರ್ಟರ್‌ಫೈನಲ್‌ನಲ್ಲಿ ಶ್ರೀಕಾಂತ್ ಅವರು ಡೆನ್ಮಾರ್ಕ್‌ನ ಜಾನ್ ಒ’ಜಾರ್ಜನ್‌ಸನ್‌ರನ್ನು 21-19, 21-19 ನೇರ ಗೇಮ್‌ಗಳ ಅಂತರದಿಂದ ಮಣಿಸಿ ಅಂತಿಮ 8ರ ಘಟ್ಟಕ್ಕೆ ಪ್ರವೇಶಿಸಿದ್ದಾರೆ.
ಶ್ರೀಕಾಂತ್ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಏಕೈಕ ಆಟಗಾರನಾಗಿದ್ದಾರೆ.