ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಮೃತ್ಯು
Update: 2016-08-15 23:51 IST
ಕಾಪು, ಆ.15: ಮೂಡಬೆಟ್ಟು ಗ್ರಾಮದ ಕಟ್ಟಿಗೆರೆಯ ಮಹಾಕಾಳಿ ಗ್ಯಾರೇಜ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ.15ರಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಮೂಡಬೆಟ್ಟು ಗ್ರಾಮದ ಶಂಕರ ಶೆಟ್ಟಿ (74) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ ವಾಕಿಂಗ್ ಹೋಗಿದ್ದ ಶಂಕರ್ ಶೆಟ್ಟಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಶಂಕರ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.