ಜಮ್ಮು ವಿನಲ್ಲಿ ಭದ್ರತಾ ಪಡೆ -ನಾಗರಿಕರ ಘರ್ಷಣೆ; ಐದು ಸಾವು, 31ಕ್ಕೂ ಅಧಿಕ ಮಂದಿಗೆ ಗಾಯ
ಶ್ರೀನಗರ, ಆ.16: ಗಲಭೆ ಪೀಡಿತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಕಾಣಿಸಿಕೊಂಡಿದ್ದು, ಭದ್ರತಾ ಪಡೆ ಮತ್ತು ನಾಗರಿಕರ ನಡುವೆ ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಘರ್ಷಣೆ ಪ್ರಕರಣಗಳಲ್ಲಿ ಐದು ಮಂದಿ ಮೃತಪಟ್ಟು 31ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ,
ಬೆರ್ವಾದ ಅರಿಪಂಥಾನ್ ಎಂಬಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಗುಂಡು ಹಾರಿಸಿದ ಪರಿಣಾಮವಾಗಿ ಕನಿಷ್ಠ ಹದಿನೈದು ಮಂದಿ ಗಾಯಗೊಂಡರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅನಂತನಾಗ್ ಜಿಲ್ಲೆಯಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ಪೊಲೀಸರತ್ತ ಕಲ್ಲು ತೂರಾಟದಲ್ಲಿ ತೊಡಗಿದ್ದ ಗುಂಪನ್ನು ಚದುರಿಸಲು ಪೊಲಿಸರು ಗುಂಡು ಹಾರಿಸಿದರು. ಪರಿಣಾಮವಾಗಿ 16ಕ್ಕೂ ಅಧಿಕ ಮಂದಿ ಗಾಯಗೊಂಡರು ಎಂದು ತಿಳಿದು ಬಂದಿದೆ.
ಹಿಜ್ಬುಲ್ ಮುಜಾಹಿದೀನ್‌ಗೆ ಸೇರಿದ ಉಗ್ರ ಬುರ್ಹಾನ್ ವಾನಿ ಹತ್ಯೆ ಯ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ತೀವ್ರಗೊಂಡಿತ್ತು. ಭದ್ರತಾ ಪಡೆದ ಮತ್ತು ನಗರಿಕರ ನಡುವಿನ ಘರ್ಷಣೆಯಲ್ಲಿ ಈ ವರೆಗೂ 65ಕ್ಕೆ ಏರಿದ್ದು 5 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.