×
Ad

ತೊಕ್ಕೊಟ್ಟು: ರೈಲಿನಿಂದ ಬಿದ್ದು ಯುವಕ ಮೃತ್ಯು

Update: 2016-08-16 15:11 IST

ಕೊಣಾಜೆ, ಆ.16: ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಬಳಿ ಚಲಿಸುತ್ತಿದ್ದ ರೈಲಿನಿಂದ ಎಸೆಯಲ್ಪಟ್ಟು ಮಂಗಳೂರು ನಗರದ  ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.

ಮೃತಪಟ್ಟ ಯುವಕನನ್ನು ಕಾಸರಗೋಡು, ಚೆರ್ವತ್ತೂರು ವಡಕ್ಕಳ್ ವೀಡ್ ನಿವಾಸಿ ಕರುಣಾಕರಣ್ ಅವರ ಪುತ್ರ ಶರುಣ್ (19) ಎಂದು ಗುರುತಿಸಲಾಗಿದೆ. ನಗರದ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಯಾಗಿರುವ ಈತ ಕಣ್ಣೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ತೊಕ್ಕೊಟ್ಟು ಬಳಿ ಆಯತಪ್ಪಿ ಹೊರಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪಿದ್ದಾರೆ. 

ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ವಿದ್ಯಾರ್ಥಿ ಪೋಷಕರು ಆಸ್ಪತ್ರೆಗೆ ಭೇಟಿ ನೀಡಿ ಮೃತದೇಹವನ್ನು ಗುರುತಿಸಿದ್ದಾರೆ.

ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News