ಬೈಕ್‌ಗೆ ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Update: 2016-08-16 16:09 IST
ಬೆಳ್ತಂಗಡಿ, ಆ.16: ಬಸ್ ಹಾಗೂ ಬೈಕ್ ಪರಸ್ಪರ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕೊಕ್ರಾಡಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಸಾವ್ಯ ನಿವಾಸಿ ಶೀನ ಪೂಜಾರಿ(48) ಎಂದು ಗುರುತಿಸಲಾಗಿದೆ.
ಅವರು ಬೈಕ್‌ನಲ್ಲಿ ನಾರಾವಿ -ಕೊಕ್ರಾಡಿ ರಸ್ತೆಯಲ್ಲಿ ಕೊಕ್ರಾಡಿ ಶಾಲೆಯ ಬಳಿ ಬರುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿಯಾಯಿತು. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಅಡಿಕೆ ಸುಲಿಯುವ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಇವರು ಸಂಕ್ರಮಣ ನಿಮಿತ್ತ ದೇವಸ್ಥಾನಕ್ಕೆ ತೆರಳಿ ಮರಳಿ ಬರುತ್ತಿದ್ದರು ಎನ್ನಲಾಗಿದೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.