×
Ad

ಜಲಸಾಹಸ ಕ್ರೀಡಾ ಕೇಂದ್ರಕ್ಕೆ ಸಚಿವ ದೇಶಪಾಂಡೆ ಚಾಲನೆ

Update: 2016-08-16 22:19 IST

 ಕಾರವಾರ, ಆ. 16: ಕಾಳಿ ನದಿಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಕೋಡಿಭಾಗದ ಕಾಳಿ ಸಂಗಮದ ಬಳಿ ಜಲಸಾಹಸ ಕ್ರೀಡಾ ಕೇಂದ್ರಕ್ಕೆ ಹಸಿರು ಬಾವುಟ ಹಾರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲಕರ ವಾತಾವರಣವಿದೆ. ರಾಜ್ಯ ಪ್ರವಾಸೋದ್ಯಮದಲ್ಲಿ ಮೂರನೇ ಸ್ಥಾನದಲ್ಲಿದೆ. ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಜನರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ದೇಶಪಾಂಡೆ ಅವರು ಕರೆ ನೀಡಿದರು.

ಪ್ರವಾಸೋದ್ಯಮದ ಮೂಲಕ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದ್ದು ಜನರು ಇದರ ಸದುಪಯೋಗ ಪಡೆಯಲು ಮುಂದಾಗಬೇಕು. ಸ್ವಉದ್ಯೋಗಗಳ ಮೂಲಕ ಜೀವನವನ್ನು ಸುಧಾರಿಸಿಕೊಳ್ಳಬೇಕು. ಅಲ್ಲದೆ, ಈಗಾಗಲೇ ಕಾಳಿ ನದಿಯಲ್ಲಿ ಆರಂಭಿಸಿರುವ ಜಲಸಾಹಸ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಕುಮಾರ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News