ಆರೋಪಿಗಳ ಮಂಪರು ಪರೀಕ್ಷೆಗೆ ಆಗ್ರಹ
Update: 2016-08-16 23:49 IST
ಉಡುಪಿ, ಆ.16: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸತ್ಯಾಂಶ ಹೊರಬರಬೇಕಾದರೆ ಪ್ರಮುಖ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಪ್ರಕರಣದ ಕುರಿತು ಜನರಲ್ಲಿ ಹೆಚ್ಚುತ್ತಿರುವ ಸಂಶಯಗಳನ್ನು ಕೂಡಲೇ ನಿವಾರಿಸಿ ತಪ್ಪಿತಸ್ಥರಿಗೆ ಸೂಕ್ತಶಿಕ್ಷೆಯಾಗುವಂತೆ ಕ್ರಮ ಜರಗಿಸಬೇಕು ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಐಕಳಬಾವ ಚಿತ್ತರಂಜನ್‌ದಾಸ್ ಶೆಟ್ಟಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.