ನಿಧನ

Update: 2016-08-16 18:35 GMT

ಅನಂತ ಆಚಾರ್ಯ

ಉಪ್ಪಿನಂಗಡಿ. ಆ.16: ಹಿರಿಯ ಚಿನ್ನದ ಕುಶಲಕರ್ಮಿ, ರಾಮನಗರ ನಿವಾಸಿ ಅನಂತ ಆಚಾರ್ಯ(90) ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಅವರು ತನ್ನ ಸ್ವಗೃಹದಲ್ಲಿ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಉಪ್ಪಿನಂಗಡಿ ಕ್ಷೇತ್ರದ ತಾಪಂ ಸದಸ್ಯೆ ಸುಜಾತ ಕೃಷ್ಣ ಆಚಾರ್ಯ ಸಹಿತ ಒಟ್ಟು ನಾಲ್ವರು ಪುತ್ರಿಯರು ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಮೃತರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಸಮಿತಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೇಶವ ಗೌಡ ಬಜತ್ತೂರು, ಉಪಾಧ್ಯಕ್ಷೆ ಉಷಾಚಂದ್ರ ಮುಳಿಯ, ಯುವಮೋರ್ಚಾ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಜಿಪಂ ಸದಸ್ಯೆ ಶಯನಾ ಜಯಾನಂದ್, ತಾಪಂ ಮಾಜಿ ಸದಸ್ಯ ಉಮೇಶ್ ಶೆಣೈ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News