ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2016-08-16 18:41 GMT

ಮಂಗಳೂರು, ಆ.16: 2016-17ನೆ ಸಾಲಿನ ಪ.ಜಾತಿ ಮತ್ತು ಪ.ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಹೊಸದಾಗಿ 1ನೆ ತರಗತಿಗೆ ಪ್ರವೇಶ ಪಡೆದ ಹಾಗೂ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡದಿರುವ ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಲ್ಲಿ ಇಲಾಖೆಯ ವೆಬ್‌ಸೈಟ್ www.sw.kar.nic.inನಲ್ಲಿ ಅರ್ಜಿ ಸಲ್ಲಿಸಬೇಕು.

ಬೇರೆ ಶಾಲೆಯಿಂದ ವರ್ಗಾವಣೆಗೊಂಡು ದಾಖಲಾಗಿರುವ ವಿದ್ಯಾರ್ಥಿಗಳ ವಿರವನ್ನು ನಿಗದಿತ ನಮೂನೆಯನ್ನು ಕಚೇರಿಯಿಂದ ಪಡೆದು ಭರ್ತಿ ಮಾಡಿ ಆಯಾ ಶಾಲಾ ಮುಖ್ಯ ಶಿಕ್ಷಕರು, ಸಹಾಯಕ ನಿದೇರ್ರ್ಶಕರ ಕಚೇರಿ(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಬಂಟ್ವಾಳ ತಾಲೂಕು, ಬಿ.ಸಿ.ರೋಡ್ ಇಲ್ಲಿಗೆ ನೀಡಬೇಕು.

ಅರ್ಜಿದಾರರು ಕರ್ನಾಟಕ ರಾಜ್ಯದ ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದವರಾಗಿರಬೇಕು. ಪೋಷಕರ ವಾರ್ಷಿಕ ಆದಾಯ ಮಿತಿ 2 ಲಕ್ಷ ರೂ. ಒಳಗಿರಬೇಕು. (ಸರಕಾರಿ/ಖಾಸತಿ ನೌಕರರಾಗಿದ್ದಲ್ಲಿ ಇತ್ತೀಚಿನ ವೇತನ ದೃಢಪತ್ರ ನೀಡಬೇಕಾಗುತ್ತದೆ). ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರಬೇಕು ಮತ್ತು ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕು. ವಿದ್ಯಾರ್ಥಿಯು ಯಾವುದೇ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿರಬಾರದು. ಆಧಾರ್ ಕಾರ್ಡ್ ಹೊಂದಿರಬೇಕು. 2016-17ನೆ ಸಾಲಿನಲ್ಲಿ ನವೀಕರಣ/ಹೊಸ ಅರ್ಜಿಯ ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರವು ಆರ್‌ಡಿ ನಂಬರ್ ಹೊಂದಿರಬೇಕು. ಹಳೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಂತರ್ಜಾಲದಲ್ಲಿ ಸ್ವೀಕೃತವಾಗುವುದಿಲ್ಲ. ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿ/ಪೋಷಕರಿಗೆ ಹಾಗೂ ಮುಖ್ಯ ಶಿಕ್ಷಕರಿಗೆ ಸೂಚನೆಗಳಿದ್ದು ಇದನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News