ಸಾಲೆತ್ತೂರು: ಶಾಲಾ ಶಿಕ್ಷಕಿಯ ವರ್ಗಾವಣೆ ವಿರೋಧಿಸಿ ಧರಣಿ
Update: 2016-08-17 16:06 IST
ಬಂಟ್ವಾಳ, ಆ.17: ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಯ ದಿಢೀರ್ ವರ್ಗಾವಣೆಯನ್ನು ವಿರೋಧಿ ಸಾಲೆತ್ತೂರು ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು, ಪೋಷಕರು, ಊರಿನ ನಾಗರಿಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿ ಚಿತ್ರಕಲಾರನ್ನು ಇಲಾಖೆ ವರ್ಗಾಯಿಸಿ ಆದೇಶ ಹೊರಡಿಸಿದೆ. ತಕ್ಷಣ ಆದೇಶವನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾಧಿಕಾರಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಶಿಕ್ಷಕಿಯ ವರ್ಗಾವಣೆ ಆದೇಶವನ್ನು ರದ್ದುಪಡಿಸುವ ಬಗ್ಗೆ ಚರ್ಚಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಡಲಾಯಿತು.