ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
Update: 2016-08-17 23:46 IST
ಬಂಟ್ವಾಳ, ಆ.17: ಬಾಲಕಿಗೆ ಹತ್ತಿರದ ಸಂಬಂಧಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಅಳಿಕೆ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಉಕ್ಕುಡದಲ್ಲಿ ಬಂಧಿಸಿದ ಘಟನೆ ಬುಧವಾರ ನಡೆದಿದೆ.
ಅಳಿಕೆ ಗ್ರಾಮದ ಕಲ್ಲೆಂಚಿಪಾದೆ ಬಾಲಕೃಷ್ಣ ನಾಯ್ಕ ಯಾನೆ ಕೇಶವ(31) ಬಂಧಿತ ಆರೋಪಿಯಾಗಿದ್ದಾನೆೆ. 9 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ, ಬಲಾತ್ಕಾರವಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್., ಸಿ.ಐ. ಮಂಜಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಕ್ಕುಡದಲ್ಲಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ ಅವರ ತಂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.