ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಸಚಿವ ಪ್ರಮೋದ್
Update: 2016-08-18 16:10 IST
ಉಡುಪಿ, ಆ.18: ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಗೀಡಾದ ಪ್ರವೀಣ್ ಪೂಜಾರಿ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಹತ್ಯೆಯಾದ ಕೆಂಜೂರಿನ ಪ್ರವೀಣ್ ಪೂಜಾರಿ ಮನೆಗೆ ಭೇಟಿ ನೀಡಿದ ಸಚಿವರು, ಮನೆಮಂದಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗಾಗಲೇ ಐಜಿಪಿ ಜೊತೆ ಮಾತನಾಡಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.