ಇಂದು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಭೆ
Update: 2016-08-19 00:05 IST
ಬ್ರಹ್ಮಾವರ, ಆ.18: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಭೆಯನ್ನು ಆ.19ರಂದು ಸಂಜೆ 5ಕ್ಕೆ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಇರುವ ರುಚಿರ ಕಾಂಪ್ಲೆಕ್ಸ್‌ನ ಗಣೇಶ್ ಸಭಾಭವನದಲ್ಲಿ ಕರೆಯಲಾಗಿದೆ.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.