ಬಿಜೆಪಿ ಅಧಿಕಾರಕ್ಕಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ

Update: 2016-08-18 18:36 GMT

ಬೆಂಗಳೂರು, ಆ.18: ದಲಿತ ಹಾಗೂ ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಯನ್ನು ಅಧಿಕಾರ ತರುವುದಕ್ಕಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ಸ್ ಸ್ಥಾಪಿಸಲಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಳಿದ ಹಾಗೂ ದಲಿತ ಸಮುದಾಯದ ಸಂಖ್ಯೆ ಹೆಚ್ಚಿದ್ದು, ಇವರನ್ನು ಬಿಜೆಪಿಯತ್ತ ಸೆಳೆಯುವ ನಿಟ್ಟಿನಲ್ಲಿ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಕೆಲಸ ಮಾಡಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೇರಿಸುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಹಿಂದುಳಿದ ಹಾಗೂ ದಲಿತರನ್ನು ಬಿಜೆಪಿಯತ್ತ ಸೆಳೆಯುವ ನಿಟ್ಟಿನಲ್ಲಿ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನಲ್ಲಿ ನಾನು ನಿಮಿತ್ತ ಮಾತ್ರ. ಹಿಂದುಳಿದ ಹಾಗೂ ಸಮುದಾಯದ ಎಲ್ಲ ಮುಖಂಡರು ಸೇರಿ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಲು ಮುಂದಾಗಿದ್ದಾರೆ. ಆ ಮುಖಂಡರು ಇರು ಅನ್ನುವವರೆಗೂ ಇರುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News