×
Ad

ಉದ್ಯಮಿ ಸೇರಿ ಇಬ್ಬರ ಸೆರೆ

Update: 2016-08-19 00:08 IST

ಬೆಂಗಳೂರು, ಆ.18: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ನಿಗೂಢ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಪೊಲೀಸರು ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಇಲ್ಲಿನ ಸಂಜಯ್‌ನಗರದ ಆರ್‌ಎಂವಿ 2ನೆಹಂತದ 16ನೆ ಕ್ರಾಸ್‌ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ನವೀನ್ ಶೆಟ್ಟಿ(43) ಹಾಗೂ ನಾಯಿ ತಳಿ ವ್ಯಾಪಾರಿ ಅಶ್ವಿನ್‌ಶೆಟ್ಟಿ (19) ಎಂದು ಸಿಐಡಿ ಪೊಲೀಸರು ಗುರುತಿಸಿದ್ದಾರೆ.
  ಗುರುವಾರ ಮಧ್ಯಾಹ್ನ 6 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ರೂವಾರಿ ಭಜರಂಗದಳದ ಪ್ರವೀಣ್‌ಖಾಂಡ್ಯ ಜೊತೆ ಆರೋಪಿಗಳು ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಪ್ರಕರಣದ ದೂರುದಾರ ತೇಜಸ್‌ಗೌಡ ಅಪಹರಣ ಮಾಡುವಲ್ಲಿ ಆರೋಪಿಗಳು ಭಾಗಿಯಾಗಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.
  ಯುವಕನ ಅಪಹರಣ ಪ್ರಕರಣ ಸಂಬಂಧ ಈಗಾಗಲೇ ಸಿಐಡಿ ತನಿಖಾ ತಂಡ ಹಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಅಲ್ಲದೆ, ಭಜರಂಗ ದಳ ರೂಪಿಸಿದ ಸಂಚಿಗೆ ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಸವದತ್ತಿ ಸಮೀಪದಲ್ಲಿನ ತಮ್ಮ ಪತ್ನಿ ನಿವಾಸದಲ್ಲಿ ಜು.5ರಂದು ನಿಗೂಢ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣ ಸಿಐಡಿ ತನಿಖೆ ನಡೆಯುತ್ತಿದ್ದು, ಪ್ರಮುಖ ಆರೋಪಿ ಪ್ರವೀಣ್ ಖಾಂಡ್ಯ ಸೇರಿ ಇನ್ನಿತರರ ಬಂಧನಕ್ಕೆ ಸಿಐಡಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News