×
Ad

ಕಾಸರಗೋಡು: ಕೆರೆಯಲ್ಲಿ ವೃದ್ಧೆಯ ಮೃತದೇಹ ಪತ್ತೆ

Update: 2016-08-19 11:00 IST

ಕಾಸರಗೋಡು, ಆ.19: ಇಲ್ಲಿನ ಆದೂರಿನ ಕೆರೆಯೊಂದರಲ್ಲಿ ವೃದ್ಧೆಯೋರ್ವರ ಮೃತದೇಹ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ.

ಆದೂರು ದೇಲಂಪಾಡಿಯ ಲೀಲಾವತಿ (75) ಮೃತಪಟ್ಟವರು.

ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದರು. ಮನೆಮಂದಿ ಬೆಳಗ್ಗೆ ಎದ್ದು ನೋಡಿದಾಗ ಲೀಲಾವತಿಯವರು ಮನೆಯಿಂದ ನಾಪತ್ತೆಯಾಗಿದ್ದರು. ಅಕ್ಕಪಕ್ಕ ಹುಡುಕಾಡಿದಾಗ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದರು. ಆದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News