×
Ad

ವಾಮಂಜೂರು:ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಶರಣ್ ಆಸ್ಪತ್ರೆಯಲ್ಲಿ ಮೃತ್ಯು

Update: 2016-08-19 13:54 IST

ಮಂಗಳೂರು, ಆ.19: ಹಾಡಹಗಲೇ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಶೆಡ್ಡೆ ನಿವಾಸಿ ಶರಣ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶುಕ್ರವಾರ ಮಧ್ಯಾಹ್ನ ವಾಮಂಜೂರು ಪೆಟ್ರೋಲ್ ಪಂಪ್ ಬಳಿ ದುಷ್ಕರ್ಮಿಗಳ ತಂಡವೊಂದು ಶರಣ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈಯಲೆತ್ನಿಸಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಶರಣ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೂಡುಶೆಡ್ಡೆ ನಿವಾಸಿ ರಿಝ್ವಾನ್ ಮತ್ತು ತಂಡ ಕೃತ್ಯ ಎಸಗಿದೆ ಎಂದು ಹೇಳಲಾಗಿದೆ. ಹಳೇ ವೈಷಮ್ಯವೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News