ಯೆನೆಪೊಯ ಮುಹಮ್ಮದ್ ಕುಂಞಿಯವರಿಗೆ ಸನ್ಮಾನ

Update: 2016-08-19 16:10 GMT

ಮಂಗಳೂರು, ಆ.19: ಕಳೆದ 8 ವರ್ಷಗಳ ಕಾಲ ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಯೆನೆಪೊಯ ಮುಹಮ್ಮದ್ ಕುಂಞಿ ಅವರ ಸೇವೆಯನ್ನು ಪರಿಗಣಿಸಿ ಮಂಗಳೂರು ಹಜ್ ನಿರ್ವಹಣಾ ಸಮಿತಿ ಹಾಗೂ ರಾಜ್ಯ ವಕ್ಫ್ ಸಮಿತಿ ವತಿಯಿಂದ ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್.ರೋಶನ್ ಬೇಗ್ ಇತ್ತೀಚೆಗೆ ಬಜ್ಪೆಯ ಹಳೆ ಏರ್‌ಪೋರ್ಟ್‌ನಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಚಿವ ಬಿ.ರಮಾನಾಥ ರೈ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಮೊಯ್ದೀನ್ ಬಾವ, ಮೇಯರ್ ಹರಿನಾಥ್, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಕೆ.ಎಸ್.ಮುಹಮ್ಮದ್ ಮಸೂದ್, ಮುಡ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ವಿಮಾನ ನಿಲ್ದಾಣದ ನಿರ್ದೇಶಕ ರಾಧಾಕೃಷ್ಣ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ರಾಜ್ಯ ಹಜ್ ಸಮಿತಿಯ ಕಾರ್ಯ ನಿರ್ವಹಣಾಧಿಕಾರಿ ಸರ್ಫರಾಝ್ ಖಾನ್, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ನಕ್ವಾ ಯಹ್ಯಾ ಮಲ್ಪೆ ಹಾಗೂ ಬಿ.ಎಚ್.ಖಾದರ್ ಬಂಟ್ವಾಳ ಉಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News