ಭೀಕರ ಕೋಮುಘರ್ಷಣೆ: ಬರೇಲಿಯಲ್ಲಿ ಉದ್ವಿಗ್ನ ಸ್ಥಿತಿ
ಬರೇಲಿ, ಆ.20: ಮಸೀದಿಯಲ್ಲಿ ‘ಆಝಾನ್’ಗಾಗಿ ಧ್ವನಿವರ್ಧಕಗಳನ್ನು ಬಳಸಿದ ವಿಚಾರವಾಗಿ ಎರಡು ಸಮುದಾಯಗಳ ಗುಂಪುಗಳ ನಡುವೆ ಘರ್ಷಣೆ ನಡೆದ ಬಳಿಕ್ಲ ಉತ್ತರಪ್ರದೇಶದ ಬರೇಲಿ ನಗರದಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದೆ.ಒಂದು ಕೋಮಿಗೆ ಸೇರಿದ ಜನರ ಗುಂಪೊಂದು ಹಫೀಝ್‌ಗಂಝ್ ಪ್ರದೇಶದಲ್ಲಿರುವ ಮಸೀದಿಯೊಳಗೆ ಅಕ್ರಮಮವಾಗಿ ಪ್ರವೇಶಿಸಿ ಅಲ್ಲಿದ್ದವರೊಂದಿಗೆ ವಾಗ್ವಾದಕ್ಕಿಳಿಯಿತು. ಆನಂತರ ಎರಡೂ ಗುಂಪುಗಳು ಪರಸ್ಪರ ಕಲ್ಲುತೂರಾಟ ಹಾಗೂ ಗುಂಡೆಸೆತ ತೊಡಗಿದ್ದರಿಂದ ಪರಿಸ್ಥಿತಿ ಹಿಂಸಾತ್ಮಕ ತಿರುವನ್ನು ಪಡೆಯಿತೆಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯಲ್ಲಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆಂದು ಅವರು ಹೇಳಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ದೊರೆತ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಯಿಂದ ಮೊದಲನೇ ತಂಡವನ್ನು ಸ್ಥಳಕ್ಕೆ ರವಾನಿಸಲಾಯಿತು. ಆನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಯಿತೆಂದು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಯಮುನಾ ಪ್ರಸಾದ್ ತಿಳಿಸಿದ್ದಾರೆ.
ಎರಡೂ ತಂಡಗಳ ಸುಮಾರು 300 ಮಂದಿ ಹಿಂಸಾಚಾರದಲ್ಲಿ ತೊಡಗಿದ್ದವು. ಹೆಚ್ಚುವರಿ ಪಡೆಗಳು ಸ್ಥಳಕ್ಕೆ ಧಾವಿಸಿದ ಕೂಡಲೇ ಸ್ಥಳದಿಂದ ಪರಾರಿಯಾದವು. ಆದರೆ ನೆರೆಹೊರೆಯ ಪ್ರದೇಶಗಳಲ್ಲಿ ಶುಕ್ರವಾರ ತಡಸಂಜೆಯವರೆಗೂ ಎರಡೂ ಕೋಮುಗಳ ನಡುವೆ ಘರ್ಷಣೆಗಳು ನಡೆದಿದ್ದಾಗಿ ವರದಿಗಳು ಬಂದಿವೆ. ಕೇಂದ್ರ ಗೃಹ ಸಚಿವ ರಾಜ್‌ನಾಥ್‌ಸಿಂಗ್ ಅವರ ಭ್ಚೇಟಿಯ ಹಿನ್ನೆಲೆಯಲ್ಲಿ ಶಹಜಹಾನ್‌ಪುರ್‌ನಲ್ಲಿ ಭದ್ರತಾ ವ್ಯವಸ್ಥೆಗಾಗಿ ನಿಯೋಜಿತವಾಗಿದ್ದ ಸ್ಥಳೀಯ ಪೊಲೀಸರನ್ನು, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಹಿಂದಕ್ಕೆ ಕರೆಸಿಕೊಳ್ಳಲಾಗಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.
ಘರ್ಷಣೆಯಲ್ಲಿ ತೊಡಗಿದ್ದವರನ್ನು ಪೊಲೀಸರು ಗುರುತಿಸುವ ಹಾಗೂ ಬಂಧಿಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಯಮುನಾ ಪ್ರಸಾದ್ ತಿಳಿಸಿದ್ದಾರೆ.
ಮಸೀದಿಯಲ್ಲಿ ಆಝಾನ್‌ಗಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದಕ್ಕಾಗಿ ಒಂದು ಕೋಮಿನ ಜನರ ಗುಂಪೊಂದು ವಿರೋಧಿಸಿದ ಬಳಿಕ ಕಳೆದ ವಾರದಿಂದೀಚೆಗೆ ಆ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ತಿತಿ ನೆಲೆಸಿತ್ತು. ಆದರೆ ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿದ ಬಳಿಕ ಪರಿಸ್ಥಿತಿ ಶಮನಗೊಂಡಿತ್ತಾದರೂ, ಉದ್ವ್ನಿಗ್ನತೆ ಮುಂದುವರಿದಿತ್ತೆಂದು ಅಧಿಕೃತ ಮೂಲಗಳು ತಿಳಿಸಿವೆ.