×
Ad

ಮೆಲ್ಕಾರ್: ಜಮೀಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Update: 2016-08-20 21:12 IST

ವಿಟ್ಲ, ಆ.20: ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ತರಬೇತಿ ಶಿಬಿರವು ಶನಿವಾರ ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ನಡೆಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮಾತನಾಡಿ, ಸರಕಾರ ಹಾಗೂ ಸಂಘ-ಸಂಸ್ಥೆಗಳು ನೀಡುವ ವಿವಿಧ ವಿದ್ಯಾರ್ಥಿ ವೇತನಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಸಾಧನೆಗಳನ್ನು ಮಾಡಬೇಕು ಎಂದರು.

ಜಮೀಯತುಲ್ ಫಲಾಹ್ ಬಂಟ್ವಾಳ ಘಟಕಾಧ್ಯಕ್ಷ ಬಿ.ಎಂ. ತುಂಬೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ವಿದ್ಯಾರ್ಥಿ ವೇತನ ವಿತರಿಸಿದರು. ಕಾರ್ಯದರ್ಶಿ ಸೈಯದ್ ಝುಬೈರ್ ಷಾ, ತಾಲೂಕು ಶಿಕ್ಷಣ ಸಂಯೋಜಕ ಪ್ರಕಾಶ್ ಕೆ., ಮೆಲ್ಕಾರ್ ಮಹಿಳಾ ಕಾಲೇಜು ಪ್ರಾಂಶುಪಾಲ ಅಬ್ದುಲ್ಲತೀಫ್, ಜಮೀಯತುಲ್ ಫಲಾಹ್ ಜಿಲ್ಲಾ ಮಾಜಿ ಅಧ್ಯಕ್ಷ ಹಾಜಿ ಜಿ.ಮುಹಮ್ಮದ್ ಹನೀಫ್, ಬಂಟ್ವಾಳ ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಬಂಟ್ವಾಳ ಮೂಡ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಬ್ದುರ್ರಝಾಕ್ ಅನಂತಾಡಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಇದೇ ವೇಳೆ ದ.ಕ. ಮತ್ತು ಉಡುಪಿ ಜಿಲ್ಲಾ ಜಮೀಯತುಲ್ ಫಲಾಹ್ ನೂತನ ಅಧ್ಯಕ್ಷರಾಗಿ ಹಾಗೂ ದ.ಕ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಘಟಕದ ಕೋಶಾಧಿಕಾರಿ ಕೆ.ಕೆ. ಶಾಹುಲ್ ಹಮೀದ್‌ರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಸದಸ್ಯರುಗಳಾದ ಸುಲೈಮಾನ್ ಸೂರಿಕುಮೇರು, ಲತೀಫ್ ನೇರಳಕಟ್ಟೆ, ಅಬ್ದುಲ್ ಜಲೀಲ್ ಕರೋಪಾಡಿ, ಕೆ.ಎಸ್. ಮುಹಮ್ಮದ್ ಕಡೇಶ್ವಾಲ್ಯ, ಸೈಯದ್ ಇರಾ, ಹಾಜಿ ಅಬ್ದುರ್ರಹ್ಮಾನ್ ಮೊದಲಾದವರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಎಂ.ಎಚ್. ಇಕ್ಬಾಲ್ ಸ್ವಾಗತಿಸಿ, ರಶೀದ್ ವಿಟ್ಲ ವಂದಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News