ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಅಮಿತ್ ಶಾಗೆ ಕರಿಪತಾಕೆ ಪ್ರದರ್ಶನ
Update: 2016-08-21 10:06 IST
ಮಂಗಳೂರು, ಆ.21: ತಿರಂಗಾ ರ್ಯಾಲಿ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯನ್ನು ವಿರೋಧಿಸಿ ನಗರದ ಕದ್ರಿ ಸರ್ಕ್ಯೂಟ್ ಹೌಸ್ ಮುಂದೆ ಯುವ ಕಾಂಗ್ರೆಸ್ ಮಿಥುನ್ ರೈ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಗೋ ರಕ್ಷಕರ ಮುಖವಾಡ ಧರಿಸಿ ದಿನನಿತ್ಯ ಅಮಾಯಕ ಯುವಕರನ್ನು ಹತ್ಯೆ ಮಾಡಲಾಗುತ್ತಿದೆ. ಇದು ಪ್ರಜ್ಞಾವಂತರ ಜಿಲ್ಲೆ ಮತ್ತು ಧಾರ್ಮಿಕ ಪುಣ್ಯ ಕ್ಷೇತ್ರಗಳಿರುವ ಜಿಲ್ಲೆ. ಈ ಜಿಲ್ಲೆಗೆ ಆಗಮಿಸಿ ಮತೀಯ ಸೌಹಾರ್ದಕ್ಕೆ ಧಕ್ಕೆ ತರುವ ಯತ್ನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.
ಈ ಸಂದರ್ಭ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.