‘ಗಿಡ ನೆಡಿ, ಪರಿಸರ ಉಳಿಸಿ’ ಅಭಿಯಾನಕ್ಕೆ ಅಮಿತ್ ಶಾ ಚಾಲನೆ
Update: 2016-08-21 11:31 IST
ಮಂಗಳೂರು, ಆ.21: ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ‘ಗಿಡ ನೆಡಿ, ಪರಿಸರ ಉಳಿಸಿ’ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದರು.
ನಗರದ ಪಿವಿಎಸ್ ಬಳಿ ಇರುವ ಬಿಜೆಪಿ ಜಿಲ್ಲಾ ಕಚೇರಿ ಆವರಣದಲ್ಲಿ ರುದ್ರಾಕ್ಷಿ ಗಿಡವನ್ನು ನೆಟ್ಟು, ನೀರೆರೆಯುವ ಮೂಲಕ ಅಭಿಯಾನಕ್ಕೆ ಅಮಿತ್ ಶಾ ಚಾಲನೆ ನೀಡಿದರು.
ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತಿತರರು ಉಪಸ್ಥಿತರಿದ್ದರು.