ಕಾಸರಗೋಡು: ಲಾರಿಗೆ ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು
Update: 2016-08-21 13:27 IST
ಕಾಸರಗೋಡು, ಆ.21: ಲಾರಿ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಚಾಲಿಂಗಾಲ್‌ನಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಮುಲ್ಲಾಚ್ಚೇರಿ ಎರೊಲ್‌ನ ನಿವಾಸಿ ಪ್ರಕಾಶ್ (36) ಎಂದು ಗುರುತಿಸಲಾಗಿದೆ.
ಪ್ರಕಾಶ್ ಅವರು ತನ್ನ ಮನೆಯಿಂದ ಪತ್ನಿಯ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಚಾಲಿಂಗಾಲ್ ಕೇಳೊಟ್ ಬಳಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.