ಮಂಗಳೂರು ತಾಲೂಕುಮಟ್ಟದ ಪ್ರಾಥಮಿಕ/ಪ್ರೌಢಶಾಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿ
ಉಳ್ಳಾಲ, ಆ.22: ನಮ್ಮ ದೇಶದಲ್ಲಿ ಕೋಟಿಗಟ್ಟಲೆ ಜನಸಂಖ್ಯೆ ಇದ್ದರೂ ಒಲಿಂಪಿಕ್ಸ್‌ನಲ್ಲಿ ಬೆರಳೆಣಿಕೆಯ ಪದಕಗಳನ್ನು ಗಳಿಸುವಲ್ಲಿ ಮಾತ್ರ ದೇಶವು ಶಕ್ತವಾಗಿದೆ. ದೇಶದಲ್ಲಿ ಒಲಿಂಪಿಕ್ಸ್ ಕ್ರೀಡೆಗಳಿಗೆ ಯಾವುದೇ ರೀತಿಯ ಪ್ರೋತ್ಸಾಹ ದೊರೆಯುತ್ತಿಲ್ಲ. ಶಾಲಾಮಟ್ಟದಲ್ಲೇ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್‌ಕುಮಾರ್ ಅಭಿಪ್ರಾಯಪಟ್ಟರು.
ದ.ಕ. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಉಳ್ಳಾಲ ಭಾರತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಾಸ್ತಿಕಟ್ಟೆಯ ಭಾರತ್ ಮೈದಾನದಲ್ಲಿ ನಡೆಯಲಿರುವ ಎರಡು ದಿನಗಳ ಮಂಗಳೂರು ತಾಲೂಕುಮಟ್ಟದ ಪ್ರಾಥಮಿಕ/ಪ್ರೌಢಶಾಲಾ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.
ಕ್ರೀಡಾಕೂಟದ ಸಭಾ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್ ಉದ್ಘಾಟಿಸಿದರು. ಮೈದಾನದಲ್ಲಿ ತೆಂಗಿನಕಾಯಿ ಒಡೆದು ಫುಟ್ಬಾಲ್ ಕ್ರೀಡಾಕೂಟಕ್ಕೆ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಜಿ ಡಾ.ಕೆ.ಎ.ಮುನೀರ್ ಬಾವ ಚಾಲನೆ ನೀಡಿದರು.