27ರಂದು ಅಂಡ್‌ನೇರ್ಚೆ
Update: 2016-08-22 20:18 IST
ಮಂಗಳೂರು, ಆ. 22: ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಅಶೈಖ್ ಅಸೈಯದ್ ಮುಹಮ್ಮದ್ ವೌಲಾ ಜಲಾಲ್ ಮಸ್ತಾನ್ ಅಲ್ ಬುಖಾರಿ ಅವರ 90ನೆ ಅಂಡ್‌ನೇರ್ಚೆ ಆಗಸ್ಟ್ 27ರಂದು ಬೆಳಗ್ಗೆ 10 ಗಂಟೆಗೆ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಕೂಟುಝಿಯಾರತ್, ಖತಮುಲ್ ಕುರ್‌ಆನ್ ಹಾಗೂ ಸಿಲ್‌ಸಿಲಾ ಪಾರಾಯಣ ನಡೆಯಲಿದ್ದು, ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅಧ್ಯಕ್ಷ ಹಾಜಿ ವೈ.ಅಬ್ದುಲ್ಲಾ ಕುಂಞಿ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಹಾಜಿ ಎಸ್.ಎಂ.ರಶೀದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.