ಗೋವಾ ಮದ್ಯ ವಶ
Update: 2016-08-22 22:41 IST
ಕಾರವಾರ, ಆ.22: ಅಕ್ರಮವಾಗಿ ಸಾಗಣೆಯಾಗುತ್ತಿದ್ದ ಗೋವಾ ಮದ್ಯವನ್ನು ಕರಾವಳಿ ಕಾವಲುಪಡೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದಿದ್ದಾರೆ.
ಕಾರವಾರದ ಬೈತಕೋಲ ಬಳಿ ಅಕ್ರಮವಾಗಿ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಪಡೆದ ಪೊಲೀಸರು 39 ಸಾವಿರ ರೂ. ವೌಲ್ಯದ ಗೋವಾ ಮದ್ಯ ಹಾಗೂ ಸ್ಕೂಟರ್‌ನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಆರೋಪಿ ಗೋಪಿಚಂದ್ ಸುಳಿವು ಸಿಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಅಂಕೋಲಾದ ಬೇಲೆಕೇರಿಯಲ್ಲೂ ಮಾರುತಿ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 80 ಸಾವಿರ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ಹಾಗೂ ದಾಳಿ ವೇಳೆ ಕಾರು ಸಹಿತ ವಶಕ್ಕೆ ಪಡೆದಿದ್ದಾರೆ. ಇನ್‌ಸ್ಪೆಕ್ಟರ್ ಎಸ್.ಎಂ. ರಾಣೆ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ಕುರಿತು ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಗಿದೆ.