ಬಿಬಿಎಂಪಿಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು
Update: 2016-08-23 12:06 IST
ಬೆಂಗಳೂರು, ಆ.23: ಜೆಡಿಎಸ್ ಮೈತ್ರಿಯೊಂದಿಗೆ ಬಿಬಿಎಂಪಿಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಬಿಬಿಎಂಪಿಗೆ ಸೆ.19 ರಂದು ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯಲಿದೆ. ಹಾಲಿ ಮೇಯರ್ ಮಂಜುನಾಥ ರೆಡ್ಡಿ ಹಾಗೂ ಪಾಲಿಕೆಯ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ಮಂಗಳವಾರ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಮೈತ್ರಿಯನ್ನು ಮುಂದುವರಿಸುವ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.