ದೇಶದ್ರೋಹ ಕಾಯ್ದೆ ದುರುಪಯೋಗ: ರಮ್ಯಾ
Update: 2016-08-23 12:23 IST
ಬೆಂಗಳೂರು, ಆ.23: ‘‘ನಾನು ಪಾಕಿಸ್ತಾನದ ಪರವಾಗಿ ಮಾತನಾಡಿಲ್ಲ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೆ. ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ಹೇಳುವ ಹಕ್ಕಿದೆ. ಪಾಕ್ ಬಗ್ಗೆ ಹೇಳಿಕೆ ತನ್ನ ವೈಯಕ್ತಿಕ ಅಭಿಪ್ರಾಯವಾಗಿತ್ತು. ಹಾಗಾಗಿ ಕ್ಷಮೆ ಕೋರುವ ಪ್ರಶ್ನೆಯೇ ಇಲ್ಲ’’ ಎಂದು ಕಾಂಗ್ರೆಸ್‌ನ ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.
ಕೊಡಗಿನ ನ್ಯಾಯಾಲಯದಲ್ಲಿ ತನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ರಮ್ಯಾ, ಇಂದು ದೇಶದ್ರೋಹ ಕಾಯ್ದೆ ದುರುಪಯೋಗವಾಗುತ್ತಿದೆ ಎಂದು ವಿಷಾದಿಸಿದರು.