ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು: ನ್ಯಾ.ಭೀಮನಗೌಡ ನಾಯಿಕ
ಶಿವಮೊಗ್ಗ, ಆ. 24: ಉತ್ತಮ ಗುಣ-ವೌಲ್ಯ ವೆುಗೂಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಭೀಮನಗೌಡ ನಾಯಿಕ ಕಿವಿಮಾತು ಹೇಳಿದ್ದಾರೆ.
ಗರದ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ಬುಧ ವಾರ ಕಾನೂನು ಪ್ರಾಧಿಕಾರ, ಸಹ್ಯಾದ್ರಿ ಕಾಲೇಜ್‌ನ ಎನ್ನೆಸ್ಸೆಸ್ ಘಟಕ, ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಮಾದಕ ವಸ್ತುಗಳ ವ್ಯಸನ ನಿವಾರಣೆ - ಪೊಲೀಸ್ ದೂರು - ಕಾನೂನು ಅರಿವು’ ಕಾರ್ಯಾಗಾರ ಉದ್ಘಾಟಿಸಿದ ನಂತರ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳು ಸಮಾಜ ಮತ್ತು ನಾಗರಿಕರನ್ನು ದಾರಿತಪ್ಪಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಯುವ ಜನಾಂಗವು ಹೆಚ್ಚಿನ ಪ್ರಮಾಣದಲ್ಲಿ ಈ ವ್ಯಸನಕ್ಕೆ ದಾಸರಾಗುತ್ತಿರುವುದು ಕಂಡುಬರುತ್ತಿದೆ. ಯುವ ಜನಾಂಗ ಮಾದಕ ವ್ಯಸನಕ್ಕೆ ಬಲಿಯಾಗದೆ ಉತ್ತಮ ಜೀವನ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದುದಾಗಿದ್ದು, ಹಾಳು ಮಾಡಿಕೊಳ್ಳಬೇಡಿ. ಈ ಅವಧಿಯಲ್ಲಿ ಜ್ಞಾನಾರ್ಜನೆ, ವ್ಯಕ್ತಿತ್ವ ರೂಪಿಸಿಕೊಳ್ಳುವತ್ತ ಗಮನಹರಿಸಿ. ದಾರಿ ತಪ್ಪಿಸುವವರ ಬಗ್ಗೆ ಎಚ್ಚರಿಕೆಯಿಂದಿರಿ. ದೈಹಿಕ-ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ ಎಂದು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯ ದರ್ಶಿ ಸೋಮಶೇಖರ್ ಸಿ. ಬಾದಾಮಿ ಮಾತನಾಡಿ, ಪ್ರಾಧಿಕಾರವು ಪೊಲೀಸರಿಂದ ಕಿರುಕುಳವಾದ ಸಂದಭರ್ ದಲ್ಲಿ ಜನರ ನೆರವಿಗೆ ಬರಲು ಪೊಲೀಸ್ ದೂರು ಪ್ರಾಧಿಕಾರವನ್ನು ರಚಿಸಿದೆ. ಎಲ್ಲ ನ್ಯಾಯಾಲಯಗಳ ಆವರಣದಲ್ಲಿ ದೂರು ಪೆಟ್ಟಿಗೆಗಳನ್ನು ಇಡಲಾಗಿದ್ದು, ಸಾರ್ವಜನಿಕರು ಪೊಲೀಸ್ ಅಧಿಕಾರಿಗಳಿಂದ ಕಿರುಕುಳವಾದಲ್ಲಿ ಈ ಮೂಲಕ ದೂರು ಸಲ್ಲಿಸಬಹುದು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಕಾಲೇಜು ಪ್ರಾಚಾರ್ಯ ಬಿ.ಸಿ.ಗೌಡರ ಶಿವಣ್ಣ ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕರಾಗಿ ಆಗಮಿಸಿದ್ದ ಡಾ. ಕೆ.ಆರ್. ಶ್ರೀಧರ್, ಜಿಲ್ಲಾ ಔಷಧ ನಿಯಂತ್ರಣ ಇಲಾಖೆಯ ಉಪನಿಯಂತ್ರಕ ದೀಪಕ್ ಗಾಯಕ್ವಾಡ್, ಸಹಾಯಕ ನಿಯಂತ್ರಕ ಪರಶುರಾಮ್, ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಿ.ಎಸ್. ಕಾಮತ್, ಎನ್ನೆಸ್ಸೆಸ್ ಅಧಿಕಾರಿ ಮೋಹನ್ ಚಂದ್ರಗುತ್ತಿ, ಪ್ರೊ.ಜಿ.ಡಿ. ಮಂಜುನಾಥ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಸಿ. ಪಿ. ಬುಧನಾಯ್ಕೊ ಪ್ರಾಸ್ತಾವಿಕವಾಗಿ ಮಾತನಾಡಿದರು.