×
Ad

ಸಂಗಬೆಟ್ಟು: ಅಕ್ರಮವಾಗಿ ದಾಸ್ತಾನಿರಿಸಿದ್ದ ಮರಳು ವಶ

Update: 2016-08-24 23:07 IST

ಬಂಟ್ವಾಳ, ಆ. 24: ಬಾರೀ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ತಾಲೂಕು ಕಂದಾಯ ಇಲಾಖೆ ಹಾಗೂ ಜಿಲ್ಲಾ ಗಣಿ ಮತ್ತು ೂವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ತಾಲೂಕಿನ ಸಂಗಬೆಟ್ಟು ಗ್ರಾಮದ ಮುಗೇರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಇಲ್ಲಿನ ನಿವಾಸಿಗಳಾದ ರತ್ನಕುಮಾರ್ ಚೌಟ ಮತ್ತು ವಲೇರಿಯನ್ ಗೋವಿಯಸ್ ಎಂಬವರ ಜಾಗದಲ್ಲಿ ಕೆಲವು ಸಮಯದಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಮರಳು ದಾಸ್ತಾನು ಇರಿಸಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಕಮಿಷನರ್ ಡಾ. ಡಿ.ಆರ್.ಅಶೋಕ್‌ರ ಸೂಚನೆಯಂತೆ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಜಿಲ್ಲಾ ಗಣಿ ಮತ್ತು ೂವಿಜ್ಞಾನ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ವಶಪಡಿಸಿಕೊಂಡ ಲಕ್ಷಾಂತರ ರೂ. ವೌಲ್ಯದ ಸುಮಾರು 3,600 ಮೆಟ್ರಿಕ್ ಟನ್ ಅಕ್ರಮ ಮರಳನ್ನು ಲೋಕೋಪಯೋಗಿ ಇಲಾಖೆ ದಾಸ್ತಾನು ಘಟಕಕ್ಕೆ ಹಸ್ತಾಂತರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ಫಲ್ಗುಣಿ ಹೊಳೆಯಿಂದ ತೆಗೆದ ಮರಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.

ತಹಶೀಲ್ದಾರ್ ಪುರಂದರ ಹೆಗ್ಡೆ, ಭೂ ವಿಜ್ಞಾನಿ ಗಿರೀಶ ಮೋಹನ್, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಕಿರಿಯ ಇಂಜಿನಿಯರ್ ಅರುಣ್ ಪ್ರಕಾಶ್, ಕಂದಾಯ ನಿರೀಕ್ಷಕ ನವೀನ್ ಕುಮಾರ್, ಗ್ರಾಮಕರಣಿಕರಾದ ಜನಾರ್ದನ, ಬಸಪ್ಪಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News