ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
Update: 2016-08-24 23:39 IST
ಕಾರ್ಕಳ, ಆ.24: ವೈಯಕ್ತಿಕ ಕಾರಣದಿಂದ ಮನನೊಂದ ಮಾಳ ನಿವಾಸಿ ಮಹಾಬಲ ನಾಯ್ಕಿ ಎಂಬವರ ಪುತ್ರ ಅರವಿಂದ(34) ಮಂಗಳವಾರ ಮಧ್ಯಾಹ್ನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ: ಕೋಟತಟ್ಟು ಗ್ರಾಮದ ಹಂದಟ್ಟು ನಿವಾಸಿ ಅನಿಲ್ ಹಂದೆ ಎಂಬವರ ಪತ್ನಿ ವನಿತಾ ಹಂದೆ(40) ಬುಧವಾರ ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದು ಮಂಗಳವಾರ ರಾತ್ರಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದ ಕುಮ್ರಗೋಡು ನಿವಾಸಿ ಸುಜಿತ್ ಶೆಟ್ಟಿ(31) ಎಂಬವರು ಬುಧವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಬ್ರಹ್ಮಾವರ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.