ಆಮ್ನೆಸ್ಟಿ ಸಂಸ್ಥೆಯ ವಿರುದ್ಧ ಬಿಜೆಪಿ ಪ್ರತಿಭಟನೆ
Update: 2016-08-24 23:43 IST
ಉಡುಪಿ, ಆ.24: ಬೆಂಗಳೂರಿನ ಆಮ್ನೆಸ್ಟಿ ಸಂಸ್ಥೆಯ ವಿರುದ್ಧ ಮತ್ತು ಎಬಿವಿಪಿ ಕಾರ್ಯಕರ್ತರ ಮೇಲಿನ ಪೋಲಿಸ್ ದೌರ್ಜನ್ಯವನ್ನು ಖಂಡಿಸಿ ಬಿಜೆಪಿ ಪಕ್ಷವು ಬುಧವಾರ ಉಡುಪಿ, ಬ್ರಹ್ಮಾವರ, ಕಾಪು, ಕಾರ್ಕಳ, ಕುಂದಾಪುರ ಹಾಗೂ ಬೈಂದೂರುಗಳಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾ ಮತ್ತು ನಗರ ಬಿಜೆಪಿ ವತಿಯಿಂದ ಉಡುಪಿಯ ಕ್ಲಾಕ್ ಟವರ್ ಬಳಿ ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾತನಾಡಿದರು. ಬಳಿಕ ಈ ಕುರಿತ ಮನವಿಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಯಿತು. ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ನಗರಾಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಸಹವಕ್ತಾರ ಅಂಬಲಪಾಡಿ ಶಿವಕುಮಾರ್, ಉದಯ ಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ, ಶ್ಯಾಮಲಾ ಕುಂದರ್, ಜಿಪಂ ಅಧ್ಯಕ್ಷ ದಿನಕರ ಬಾಬು, ಆರಿಫ್ ದೊಡ್ಡಣಗುಡ್ಡೆ, ಶಿಲ್ಪಾ ಸುವರ್ಣ, ರಾಜೇಶ್ ಕಾವೇರಿ ಮತ್ತಿತರರು ಉಪಸ್ಥಿತರಿದ್ದರು.