ಪೊಲೀಸ್: ತಾತ್ಕಾಲಿಕ ಪಟ್ಟಿ ಪ್ರಕಟ
Update: 2016-08-24 23:44 IST
ಮಂಗಳೂರು, ಆ.24: ಮಂಗಳೂರು ಪೊಲೀಸ್ ಘಟಕದಲ್ಲಿ 136 ಪೊಲೀಸ್ ಕಾನ್‌ಸ್ಟೇಬಲ್ ಮತ್ತು 33 ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನಡೆದ ಲಿಖಿತ ಪರೀಕ್ಷೆಯ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ವಿವರಗಳನ್ನು www.ksp.gov.in ಮತ್ತು www.mangalorepolice.com ಹಾಗೂ ಕಚೇರಿಯ ಸೂಚನಾ ಫಲಕದಲ್ಲಿ ಹಾಕಲಾಗುವುದು ಎಂದು ಹೇಳಿದರು.