ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು
Update: 2016-08-25 16:54 IST
ಕಡಬ, ಆ.25. ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ಚಾಕೋಟೆಕಟ್ಟೆ ನಿವಾಸಿ ಸಾಂತಪ್ಪ ಕುಂಬಾರ(80) ಎಂಬವರು ಕಡಬದ ಮಂಜೋಟಿ ಕೆರೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಗುರುವಾರದಂದು ಬೆಳಕಿಗೆ ಬಂದಿದೆ. ಬುಧವಾರ ಮದ್ಯಾಹ್ನದಿಂದ ನಾಪತ್ತೆಯಾಗಿದ್ದ ಇವರನ್ನು ಸಂಬಂಧಿಕರಲ್ಲಿ ವಿಚಾರಿಸಿದ್ದು, ಎಲ್ಲೂ ಪತ್ತೆಯಾಗಿರಲಿಲ್ಲ. ಗುರುವಾರ ಇವರ ಶವವು ಕೆರೆಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮೃತರ ಪುತ್ರ ಬಾಲಕೃಷ್ಣ ಎಂಬವರು ಕಡಬ ಠಾಣೆಗೆ ದೂರು ನೀಡಿದ್ದಾರೆ.