×
Ad

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Update: 2016-08-25 18:42 IST

ಬಂಟ್ವಾಳ, ಆ. 25: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ 17 ವಯೋಮಿತಿಯ 36-40 ಕೆ.ಜಿ.ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸಹನಾ ಎಂ.ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕು ಕಲಾಬಾಗಿಲು ಬುರೂಜ್ ಆಂಗ್ಲ ಮಾಧ್ಯಮ ಶಾಲೆಯ 10ನೆ ತರಗತಿ ವಿದ್ಯಾರ್ಥಿನಿಯಾದ ಸಹನಾ ಎಂ.ಶೆಟ್ಟಿ ನರ್ವಲ್ದಡ್ಡ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಹಿಂದೆ ನಡೆಸಿರುವ ಕರಾಟೆ ಸ್ಪರ್ಧೆಯಲ್ಲಿ ಸತತ ಮೂರನೆ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಕರಾಟೆಯಲ್ಲಿ ವಿಶೇಷ ಸಾಧನೆಗೈದಿರುವ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಛಾಂಪಿಯನ್ ಶಿಫ್‌ನಲ್ಲಿ ಭಾಗವಹಿಸಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮೂಡಬಿದಿರೆಯ ನದೀಂ ಮತ್ತು ಸರ್ಫರಾಜ್ ತರಬೇತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News