×
Ad

ಶಿರವಾಡದಲ್ಲಿ ಹೆಚ್ಚುತ್ತಿದೆ ಸಾಂಕ್ರಾಮಿಕ ಕಾಯಿಲೆ ಭೀತಿ

Update: 2016-08-25 21:55 IST

ಕಾರವಾರ, ಆ.25: ತಾಲೂಕಿನ ಶಿರವಾಡ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗ ಹರಡಿಕೊಂಡಿದೆ. ಜಿಲ್ಲಾಧಿಕಾರಿ ಸೂಚಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ್ದರಿಂದ ರೋಗ ಇನ್ನಷ್ಟು ಉಲ್ಬಣಗೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಗ್ರಾಮದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತಲಿನ ಪ್ರದೇಶವು ಮಲಿನಗೊಂಡಿರುವ ಕಾರಣದಿಂದ ಸುತ್ತಮುತ್ತಲಿನ ಕೆಲವರಿಗೆ ಡೆಂಗ್ ಇರುವುದು ಪತ್ತೆಯಾಗಿತ್ತು. ಈ ಹಿಂದೆ ನಡೆದ ಸಭೆಯೊಂದರಲ್ಲಿ ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಆರೋಗ್ಯ ಅಧಿಕಾರಿಗಳು ಗ್ರಾಮದಲ್ಲಿ ನ್ಯೂನ್ಯತೆ ಇರುವ ಬಗ್ಗೆ ವರದಿಗಳಲ್ಲಿ ನೀಡಿದ್ದರು.

ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಘಟಕದಿಂದ ಹರಿದು ಬರುವ ನೀರು ರಸ್ತೆ ಮೇಲೆ ಹೋಗುವುದರಿಂದ ರೋಗ ಹರಡುವ ಭೀತಿ ಇದ್ದು, ಅದನ್ನು ಕೂಡಲೇ ಸರಿಪಡಿಸಬೇಕು. ಕಸ ಹಾಕಲು ನಿರ್ಮಿಸಿದ ಸಿಮೆಂಟ್ ಕಟ್ಟೆಗಳಲ್ಲಿ ನೀರು ನಿಲ್ಲದಂತೆ ಪ್ರತೀ ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಅದಕ್ಕೆ ರಾಸಾಯನಿಕ ಸಿಂ

ಡಿಸಬೇಕು. ಘಟಕದ ಸುತ್ತಮುತ್ತ ಹೆಚ್ಚು ಸೊಳ್ಳೆಗಳು ಉತ್ಪತ್ತಿಯಾಗುತ್ತಿರುವುದರಿಂದ ಪ್ರತೀ ವಾರಕ್ಕೊಮ್ಮೆ ಫಾಗಿಂಗ್ ಮಾಡಬೇಕು ಎಂದು ಸೂಚಿಸಿದ್ದರು. ಆದರೆ ಯಾವುದನ್ನೂ ಮಾಡುತ್ತಿಲ್ಲ. ಇದರಿ ಂದ ಗ್ರಾಮದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಲ್ಲದೆ, ಘನತ್ಯಾಜ್ಯ ಶೇಖರಿಸಲ್ಪಟ್ಟ ಪ್ರದೇಶದಲ್ಲಿ ದನಕರುಗಳು ಪ್ಲಾಸ್ಟಿಕ್ ತಿಂದು ಸಾಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈಗಾಗಲೇ ಗ್ರಾಮದಲ್ಲಿ ಹಲವು ಮಂದಿಗೆ ಡೆಂಗ್ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಕೂಡಲೇ ಸಮಸ್ಯೆಯನ್ನು ಬಗೆಹರಿಸಿ ಸಾಂಕ್ರಾಮಿಕ ರೋಗವನ್ನು 

ತಡೆಗಟ್ಟುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News