ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಪೂರಕ : ಅಭಯಚಂದ್ರ ಜೈನ್

Update: 2016-08-26 13:34 GMT

ಮೂಡುಬಿದಿರೆ, ಆ.26: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ವಲಯದ ಸಂಯುಕ್ತ ಆಶ್ರಯದಲ್ಲಿ ಕಲ್ಲಬೆಟ್ಟು ಎಕ್ಸಲೆಂಟ್ ಪ್ರೌಢಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಪುರಸಭಾಧ್ಯಕ್ಷೆ ರೂಪಾ ಎಸ್.ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು.
  
ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ಪೂರಕ. ಪ್ರತಿವರ್ಷ ಹಮ್ಮಿಕೊಳ್ಳುವ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವು ವಿದ್ಯಾರ್ಥಿಗಳನ್ನು ಸಾಂಸ್ಕೃತಿಕವಾಗಿ ಬೆಳೆಸುತ್ತವೆ ಎಂದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಮೂಡುಬಿದಿರೆ ಪುರಸಭಾ ಸದಸ್ಯೆ ಸುಪ್ರಿಯಾ ಡಿ. ಶೆಟ್ಟಿ, ಜಿಲ್ಲಾ ನೋಡಲ್ ಅಧಿಕಾರಿ ರಾಧಾಕೃಷ್ಣ ಭಟ್, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ಆಡಳಿತಾಧಿಕಾರಿ ಡಾ. ಶ್ರುತಕೀರ್ತಿರಾಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ತಾಲೂಕು ನೋಡಲ್ ಅಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಘ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೂಡಬಿದಿರೆ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ. ಬಿ ಸ್ವಾಗತಿಸಿದರು. ಎಕ್ಸಲೆಂಟ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಶಾಂತಿರಾಜ ಜೈನ್ ವಂದಿಸಿದರು. ಶಿಕ್ಷಕ ಪ್ರದೀಪ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News