×
Ad

ಸೂಕ್ತ ದಾಖಲೆ ನೀಡಲಿ: ಜಿ.ಎ.ಬಾವಾ

Update: 2016-08-26 22:46 IST

ಬೆಂಗಳೂರು, ಆ.26: ಬಿಬಿಎಂಪಿ ವ್ಯಾಪ್ತಿಯ ರಾಜಕಾಲುವೆಯಲ್ಲಿ ವಿಶ್ವಾಸ್‌ಬಾವಾ ಸಂಸ್ಥೆ ಕಟ್ಟಡ ನಿರ್ಮಿಸಿದೆ ಎಂದು ಸುಳ್ಳು ಹೇಳಿಕೆ ನೀಡಿರುವ ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಬಳಿ ದಾಖಲೆಗಳಿದ್ದರೆ ಸಾಬೀತುಪಡಿಸಲಿ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಕಾಂಗ್ರೆಸ್ ಮುಖಂಡ ಜಿ.ಎ.ಬಾವಾ ಸವಾಲು ಹಾಕಿದ್ದಾರೆ.
ಶುಕ್ರವಾರ ನಗರದ ಹಮೀದ್ ಷಾ ಕಟ್ಟಡದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಪತ್ರಿಕಾಗೋಷ್ಠಿ ಏರ್ಪಡಿಸಿ ತಾನು ಭೂ ಕಬಳಿಕೆ ಮಾಡಿದ್ದೇನೆ ಎಂದು ಮಾಧ್ಯಮಗಳಿಗೆ ಮತ್ತು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಒಂದು ವೇಳೆ ಅವರ ಬಳಿ ದಾಖಲೆಗಳಿದ್ದರೆ, ಸಾಬೀತುಪಡಿಸಲಿ ಎಂದು ಹೇಳಿದರು.
ಜಿ.ಎ.ಬಾವಾ ಇಲ್ಲಿನ ಪೆಮ್ಮೇಗೌಡ ರಸ್ತೆ ವಾರ್ಡ್ ಸಂಖ್ಯೆ 62ರಲ್ಲಿ ವಿಶ್ವಾಸ್‌ಬಾವಾ ಸಂಸ್ಥೆ ಹೆಸರಲ್ಲಿ ಐದು ಅಂತಸ್ತುಗಳ ಬೃಹತ್ ವಸತಿ ಸಂಕೀರ್ಣವನ್ನು ನಿರ್ಮಿಸಿದ್ದಾರೆ ಎಂದು ಎನ್.ಆರ್.ರಮೇಶ್ ಸುಳ್ಳು ಆರೋಪ ಮಾಡಿದ್ದಾರೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ಅಲ್ಲದೆ, ನನ್ನ ಹೆಸರಿನಲ್ಲಿ ಯಾವುದೇ ರೀತಿಯ ವಿಶ್ವಾಸ್‌ಬಾವಾ ಎನ್ನುವ ಸಂಸ್ಥೆಯಿಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News