ಇಂದು ಬೆಂಗಳೂರಿಗೆ ರಾಷ್ಟ್ರಪತಿ
Update: 2016-08-26 22:46 IST
ಬೆಂಗಳೂರು, ಆ.26: ರಾಷ್ಟ್ರಪತಿ ಪ್ರಣವ್‌ಮುಖರ್ಜಿ ಎರಡು ದಿನಗಳ ಭೇಟಿಗಾಗಿ ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿಯವರನ್ನು ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಯರ್ ಮಂಜುನಾಥರೆಡ್ಡಿ ಸೇರಿದಂತೆ ಇನ್ನಿತರ ಗಣ್ಯರು ಬರ ಮಾಡಿಕೊಳ್ಳಲಿದ್ದಾರೆ.
ರಾಷ್ಟ್ರಪತಿಯು ಅಂದು ಸಂಜೆ 6 ಗಂಟೆಗೆ ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಹರೆಕೃಷ್ಣ ಗಿರಿಧಾಮದಲ್ಲಿ ಅಕ್ಷಯಪಾತ್ರ ಫೌಂಡೇಷನ್ ವತಿಯಿಂದ ಆಯೋಜಿಸ ಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿಯೊಂದಿಗೆ ಮುಖ್ಯಮಂತ್ರಿಯು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಆ.27ರಂದು ರವಿವಾರ ರಾಷ್ಟ್ರೀಯ ಕಾನೂನು ಶಾಲೆಯ 24ನೆ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಿರುವ ರಾಷ್ಟ್ರಪತಿ, ಅಂದು ಸಂಜೆಯೆ ಹೊಸದಿಲ್ಲಿಗೆ ವಾಪಸಾಗಲಿದ್ದಾರೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.