ಕೆ.ಜೆ.ಜಾರ್ಜ್ ವಿಚಾರಣೆ
Update: 2016-08-26 22:49 IST
ಬೆಂಗಳೂರು, ಆ.26: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು.
ಶುಕ್ರವಾರ ನಗರದ ಸಿಐಡಿ ಕೇಂದ್ರ ಕಚೇರಿಗೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಮಧ್ಯಾಹ್ನ 3 ಗಂಟೆಗೆ ಸಿಐಡಿ ಅಧಿಕಾರಿಗಳು ಸೂಚಿಸಿದ್ದ ಸಮಯಕ್ಕೆ ವಿಚಾರಣೆಗೆ ಹಾಜರಾದರು.
ಎಡಿಜಿಪಿ ಸಿ.ಎಚ್.ಪ್ರತಾಪ್ ರೆಡ್ಡಿ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಜಾರ್ಜ್ ಅವರನ್ನು ವಿಚಾರಣೆಗೆ ಒಳಪಡಿಸಿ, ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಹೇಳಿಕೆ ಪಡೆದಿದ್ದಾರೆ ಎಂದು ಗೊತ್ತಾಗಿದೆ.ಮಡಿಕೇರಿಯಲ್ಲಿ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೂ ಮುನ್ನ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿ ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದರು. ಈ ಸಂಬಂಧ ಜಾರ್ಜ್ ಅವರು ವಿಚಾರಣೆಗೆ ಶುಕ್ರವಾರ ಹಾಜರಾದರು.