×
Ad

ರಮ್ಯಾ ವಿರುದ್ಧ ಪ್ರತಿಭಟನೆ ಬಂಧನಕ್ಕೊಳಗಾದವರ ಬಿಡುಗಡೆ

Update: 2016-08-26 23:58 IST

 ಮಂಗಳೂರು, ಆ.26: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಂಸದೆ, ನಟಿ ರಮ್ಯಾರ ಕಾರಿಗೆ ಮೊಟ್ಟೆ ಎಸೆದು ಬಂಧನಕ್ಕೊಳಗಾಗಿದ್ದ 39 ಬಿಜೆಪಿ ಕಾರ್ಯಕರ್ತರನ್ನು ಶುಕ್ರವಾರ ಬಿಡುಗಡೆಗೊಳಿಸಲಾಗಿದೆ.
 ರಮ್ಯಾ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಕರಿಪತಾಕೆಯನ್ನು ಪ್ರದರ್ಶಿಸಿ ಮುತ್ತಿಗೆ ಹಾಕಿದ್ದ ಬಿಜೆಪಿ ಕಾರ್ಯಕರ್ತರು ಅವರು ತೆರಳುತ್ತಿದ್ದ ಕಾರಿಗೆ ಮೊಟ್ಟೆಯನ್ನು ಎಸೆದಿದ್ದರು. ಕೂಡಲೆ ಪೊಲೀಸರು 39 ಪ್ರತಿಭಟನಾಕಾರರನ್ನು ಬಂಧಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಕದ್ರಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ರಮ್ಯಾ ಬಂದಿದ್ದರು. ಈ ಸಂದರ್ಭ ವೇದಿಕೆಗೆ ಕಲ್ಲು, ಶೂ ಎಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನು ಯಾರನ್ನೂ ಬಂಧಿಸಿಲ್ಲ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News