×
Ad

ಕನ್ನಡ ಶಾಲೆಗಳಿಗೆ ಕಾಯಕಲ್ಪ: ಜಯರಾಮ ಭಟ್

Update: 2016-08-27 00:20 IST

ಮಂಗಳೂರು, ಆ.26: ಕರ್ಣಾಟಕ ಬ್ಯಾಂಕ್ ಸಿಎಸ್‌ಆರ್ ಕಾರ್ಯಕ್ರಮದ ಅಂಗವಾಗಿ ನಗರದ ಬೆಂದೂರ್‌ವೆಲ್‌ನ ಸೈಂಟ್ ಸೆಬಾಸ್ಟಿಯನ್ ಕನ್ನಡ ಪ್ರಾಥಮಿಕ ಶಾಲೆಗೆ 2 ಲಕ್ಷ ರೂ. ವೌಲ್ಯದ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಜಯರಾಮ ಭಟ್, ಕನ್ನಡದ ಉಳಿವಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಕಾಯಕಲ್ಪಆಗಬೇಕಿದೆ. ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದೇವೆ ಎನ್ನುವ ಕೀಳರಿಮೆ ಬೇಡ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಪೀರಿಯರ್ ಸಿಸ್ಟರ್ ಲೀನಾ, ಕರ್ಣಾಟಕ ಬ್ಯಾಂಕ್ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವುದು ಶ್ಲಾಘನೀಯ ಎಂದರು. ಬ್ಯಾಂಕ್‌ನ ಮುಖ್ಯಪ್ರಬಂಧಕ (ಸಾರ್ವಜನಿಕ ಸಂಪರ್ಕ) ಶ್ರೀನಿವಾಸ ದೇಶಪಾಂಡೆ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸಿಸ್ಟರ್ ಮರ್ಸಿನ್ ಸ್ವಾಗತಿಸಿದರು. ಶಿಕ್ಷಕಿ ಎಡ್ನಾ ವಂದಿಸಿದರು. ಶಿಕ್ಷಕಿ ಲೀಲಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News