ಪಿ.ಎ.ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

Update: 2016-08-27 15:20 GMT

ಕೊಣಾಜೆ, ಆ.27: ಪಿ.ಎ. ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ ಪೇಸ್ ಫೋರಂ ಹಾಗೂ ಇಗ್ನೈಟೆಡ್ ಮೈಂಡ್ಸ್ ಆಫ್ ಇಲೆಕ್ಟ್ರಾನಿಕ್ಸ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಗುರಿ ನಿರ್ಧರಿಸುವ ತಂತ್ರಗಾರಿಕೆಯ ಬಗ್ಗೆ ಮಾಹಿತಿ ಕಾರ್ಯಗಾರ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸುರತ್ಕಲ್ ಎನ್‌ಐಟಿಕೆಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಡೀನ್ ಡಾ.ಉದಯಕುಮಾರ್ ಆರ್.ವಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಜೀವನದ ಗುರಿಯನ್ನು ನಿರ್ಧರಿಸಿ, ಅದರಂತೆ ಮುಂದುವರೆದು ತಮ್ಮ ಕಾರ್ಯ ಸಾಧನೆಗೊಳಿಸುವ ವಿಷಯದ ಬಗ್ಗೆ ಮಾಹಿತಿ ಮತ್ತು ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ಇಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಅಬ್ದುಲ್ಲಾ ಗುಬ್ಬಿ ಹಾಗೂ ಬಯೋಟೆಕ್ನಾಲಜಿ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಕೃಷ್ಣಪ್ರಸಾದ್‌ಎನ್. ಉಪಸ್ಥಿತರಿದ್ದರು.

ಜೂನ್-ಜುಲೈ ತಿಂಗಳಿನಲ್ಲಿ ನಡೆದ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕಗಳಿಸಿದ ಇಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳನ್ನು ಹಾಗೂ ಆಯಾಯ ಸೆಮಿಸ್ಟರ್‌ನಲ್ಲಿ ರ್ಯಾಂಕ್ ಪಡೆದ ಬಯೋಟೆಕ್ನಾಲಜಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರೊ.ಶೈನಿ ಮ್ಯಾಥ್ಯೂ ಸ್ವಾಗತಿಸಿದರು. ಡಾ.ಅಬ್ದುಲ್ಲಾಗುಬ್ಬಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಡಾ.ಎನ್. ಕೃಷ್ಣ ಪ್ರಸಾದ್ ವಂದಿಸಿದರು.
ವಿದ್ಯಾರ್ಥಿಗಳಾದ ಫಾತಿಮತ್ ತಸ್ರೀನ್ ಮತ್ತು ಸಹದಿಯ ನಿಶಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News