ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
Update: 2016-08-28 12:07 IST
ಮಂಗಳೂರು, ಆ.28: ದ.ಕ. ಜಿಲ್ಲಾಡಳಿತ, ಜಿಪಂ, ಮಂಗಳೂರು ತಾಪಂ ಮನಪಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ -2016-17ಕ್ಕೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಇಂದು ಚಾಲನೆ ದೊರೆಯಿತು.
ಶಾಸಕ ಜೆ.ಆರ್.ಲೋಬೊ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮನಪಾ ಮೇಯರ್ ಕೆ.ಹರಿನಾಥ್, ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಡಾ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇದರ ಉಪನಿರ್ದೇಶಕ ಪ್ರದೀಪ್ ಡಿಸೋಜ, ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಚ್.ನಾಯಕ್ ಮತ್ತಿತರರು ಉಪಸ್ಥಿತರಿದ್ದರು.