ಸನತ್‌ಕುಮಾರ್ ರೈ

Update: 2016-08-28 13:26 GMT

ಬಂಟ್ವಾಳ, ಆ. 28: ಕಾವಳಮೂಡೂರು ಗ್ರಾಮದ ಬಲ್ಲೋಡಿಗುತ್ತು ನಿವಾಸಿ ಸನತ್‌ಕುಮಾರ್ ರೈ(85) ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಆ.28ರಂದು ನಿಧನ ಹೊಂದಿದರು.

ಮೃತರು ಪತ್ನಿ, ಜಿಲ್ಲಾ ಪಂಚಾಯತ್ ಸದಸ್ಯ ಬಿ.ಪದ್ಮಶೇಖರ ಜೈನ್ ಸಹಿತ ಮೂವರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಪ್ರಗತಿಪರ ಕೃಷಿಕರಾಗಿದ್ದ ಅವರು ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಮತ್ತು ಸಮಾಜ ಮುಖಿ ಕಾರ್ಯಗಳಿಂದ ಜನಾನುರಾಗಿಯಾಗಿದ್ದರು. ಕಾವಳಮೂಡೂರು ಮಾಗಣೆಯ ಗುರಿಕಾರರಾಗಿದ್ದ ಅವರು ಕಾವಳಮೂಡೂರು ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿದ್ದರು. ಕಾವಳಕಟ್ಟೆ ಶ್ರೀ ರಾಜನ್‌ದೈವ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ ದೈವಸ್ಥಾನದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದರು. ಕಾವಳಕಟ್ಟೆ ಶ್ರೀ ಆದಿನಾಥ ಸ್ವಾಮಿ ಬಸದಿಯ ಆಡಳಿತ ಧರ್ಮದರ್ಶಿಯಾಗಿದ್ದರು.

ಸಂತಾಪ

ಸನತ್‌ಕುಮಾರ್ ರೈ ನಿಧನಕ್ಕೆ ರಾಜ್ಯ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಶಕುಂತಳಾ ಟಿ. ಶೆಟ್ಟಿ, ಜೆ.ಆರ್.ಲೋಬೊ, ಕೆ.ಅಭಯಚಂದ್ರ ಜೈನ್, ಬಿ.ಎ.ಮೊಯ್ದಿನ್ ಬಾವ, ಕೆ.ವಸಂತ ಬಂಗೇರ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ತುಂಗಪ್ಪ ಬಂಗೇರ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಬುಡಾ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ಶ್ರೀ ಕ್ಷೇತ್ರ ಕಾರಿಂಜದ ಧರ್ಮದರ್ಶಿ ಪಿ.ಜಿನರಾಜ ಆರಿಗ, ಸ್ವಾತಂತ್ರ್ಯ ಹೋರಾಟಗಾರ ಭೋಜರಾಜ ಹೆಗ್ಡೆ, ನ್ಯಾಯವಾದಿ ಪಿ.ಪಿ.ಹೆಗ್ಡೆ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ