ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣಾ ಪ್ರಕ್ರಿಯೆಗೆ ಚಾಲನೆ
Update: 2016-08-28 23:26 IST
ಹೊಸದಿಲ್ಲಿ,ಆ.28: ಚುನಾವಣಾ ಸಮಿತಿಯ ರಚನೆಯೊಂದಿಗೆ ಇದೇ ಮೊದಲ ಬಾರಿಗೆ ಮಹಿಳೆಯೋರ್ವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವುದರೊಂದಿಗೆ ಜವಾಹರಲಾಲ್ ನೆಹರೂ ವಿವಿ(ಜೆಎನ್‌ಯು)ಯ ವಿದ್ಯಾರ್ಥಿ ಒಕ್ಕೂಟದ ಚುನಾವಣಾ ಪ್ರಕ್ರಿಯೆಗೆ ಚಾಲನೆ ದೊರಕಿದೆ.
ವಿದ್ಯಾರ್ಥಿ ಸಂಘದ ಸಭೆಯಲ್ಲಿ ಸ್ಕೂಲ್ ಆಫ್ ಸೋಷಿಯಲ್ ಸೈನ್ಸ್‌ಸ್‌ನ ಪ್ರಥಮ ವರ್ಷದ ಪಿಎಚ್‌ಡಿ ವಿದ್ಯಾರ್ಥಿನಿ ಇಶಿತಾ ಮೆಹ್ತಾ ಅವರನ್ನು ಮುಖ್ಯ ಚುನಾವಣಾ ಆಯುಕ್ತ(ಸಿಇಸಿ)ರನ್ನಾಗಿ ಸರ್ವಾನುಮತದಿಂದ ನೇಮಿಸಲಾಗಿದೆ ಎಂದು ಮಾಜಿ ಸಿಇಸಿ ದಿಲೀಪ್ ವೌರ್ಯ ಅವರು ತಿಳಿಸಿದರು.
ವಿದ್ಯಾರ್ಥಿ ಸಂಘದ ಚುನಾವಣೆಯು ಸೆಪ್ಟಂಬರ್‌ನಲ್ಲಿ ನಡೆಯುವ ನಿರೀಕ್ಷೆಯಿದೆ.