ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ ಪತ್ತೆ
Update: 2016-08-29 00:03 IST
ಉಪ್ಪಿನಂಗಡಿ, ಆ.28: ಇಲ್ಲಿನ ಇಳಂತಿಲ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ರವಿವಾರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, ಜಾನುವಾರುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ನಿವಾಸಿ ಅಬ್ದುಲ್ಲಾ ಎಂಬಾತ ಬಂಧಿತ ಆರೋಪಿ. ಈತ ಮಿನಿಲಾರಿಯಲ್ಲಿ ಕರಾಯ ಕಡೆಗೆ ಎರಡು ಹೋರಿಗಳನ್ನು ಸಾಗಾಟ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇವುಗಳನ್ನು ಬಿಳಿಯೂರಿನಿಂದ ಕಲ್ಲೇರಿಗೆ ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.