ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ; ಓರ್ವ ವಶಕ್ಕೆ
Update: 2016-08-29 10:45 IST
ನ್ಯೂಯಾರ್ಕ್, ಆ.29: ಅಮೆರಿಕದ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಓರ್ವ ಬಂದೂಕುಧಾರಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
ವಿಮಾನ ನಿಲ್ದಾಣದ ಟರ್ಮಿನಲ್ 8ರಲ್ಲಿ ಗುಂಡಿನ ದಾಳಿ ನಡೆದಿದೆ. ಇದರಿಂದಾಗಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ತೆರವುಗೊಳಿಸುವ ಕಾರ್ಯ ನಡೆಸುತ್ತಿದೆ. ವಿಮಾನ ನಿಲ್ದಾಣದಲ್ಲಿ ಉಗ್ರರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.